ಸಂಗೀತ, ಗಾಯನದೊಡನೆ ಭಾವಗೀತೆಗಳನ್ನು ಒದಗಿಸುವ ಅನೇಕ ಅಂತರ್ಜಾಲದ ತಾಣಗಳಿದ್ದರೂ ಸಹ ಕೇವಲ ಭಾವಗೀತೆಗಳ ಸಾಹಿತ್ಯಕ್ಕೆ ಮೀಸಲಾದ ತಾಣವಿರುವುದೇ? ತಿಳಿಯದು. ಆದರೆ ಎಷ್ಟೋ ಬಾರಿ ಇಲ್ಲಿ ಅಲೆಯುತ್ತ ಕವಿತೆಗಳ ಸಾಹಿತ್ಯಕ್ಕಾಗಿ ಅರಸಿದಾಗ ತೃಪ್ತಿಯಾಗುವಂತಹ ಫಲಿತಾಂಶ ನನಗಂತೂ ದಕ್ಕಿಲ್ಲ. ಆದ್ದರಿಂದಲೇ ಈ ಪುಟ್ಟ ಪ್ರಯತ್ನ. ಭಾವಗೀತೆಗಳ ಯಾವುದಾದರು ಸಾಲುಗಳು ಇಲ್ಲಿ ತಪ್ಪಾಗಿ ಬರೆಯಲ್ಪಟ್ಟಿದ್ದರೆ ತಿಳಿಸಿ, ಎಷ್ಟೋ ಗೀತೆಗಳು ರಚನಕಾರರ ಹೆಸರಿಲ್ಲದೆ ಹಾಗೆ ಬರೆಯಲ್ಪಟ್ಟಿವೆ, ತಿಳಿದಿದ್ದವರು ಅದನ್ನು ತಿದ್ದಬಹುದು. ಈ ಸಣ್ಣ ಪ್ರಯತ್ನದ ಬಗ್ಗೆ ನಿಮ್ಮ ಒಂದು ಚಿಕ್ಕ ಅಭಿಪ್ರಾಯವನ್ನು ತೇಲಿಬಿಟ್ಟರೆ ಮುದವೆನಿಸುವುದು.




Monday 22 August 2011

ಕೋಡಗಾನ ಕೋಳಿ ನುಂಗಿತ್ತ / Kodagana Koli nungitta

ಕೋಡಗಾನ ಕೋಳಿ ನುಂಗಿತ್ತ 
ನೋಡವ್ವ ತಂಗಿ ಕೋಡಗಾನ ಕೋಳಿ ನುಂಗಿತ್ತ ||

ಆಡು ಆನೆಯ ನುಂಗಿ
ಗೋಡೆ ಸುಣ್ಣವ ನುಂಗಿ
ಆಡಲು ಬಂದ ಪಾತರದವಳ ಮದ್ದಲಿ ನುಂಗಿತ್ತ ||

ಒಳ್ಳು ಒನಕೆಯ ನುಂಗಿ
ಕಲ್ಲು ಗೂಟವ ನುಂಗಿ
ಮೆಲ್ಲಲು ಬಂದ ಮುದುಕಿಯನ್ನೆ ನೆಲ್ಲು ನುಂಗಿತ್ತ ||

ಹಗ್ಗ ಮಗ್ಗವ ನುಂಗಿ
ಮಗ್ಗವ ಲಾಳಿ ನುಂಗಿ
ಮಗ್ಗದಾಗಿರುವ ಅಣ್ಣನನ್ನೆ ಮಣಿಯು ನುಂಗಿತ್ತ ||

ಎತ್ತು ಜತ್ತಗಿ ನುಂಗಿ
ಬತ್ತ ಬಾಣವ ನುಂಗಿ
ಮುಕ್ಕುಟ ತಿರುವೊ ಅಣ್ಣನ ಕುಣಿಯು ನುಂಗಿತ್ತ ||

ಗುಡ್ಡ ಗವಿಯನ್ನು ನುಂಗಿ
ಗವಿಯ ಇರುವೆಯು ನುಂಗಿ
ಗೋವಿಂದ ಗುರುವಿನ ಪಾದ ನನ್ನನೆ ನುಂಗಿತ್ತ ||

                                                - ಶಿಶುನಾಳ ಶರೀಫ್ 

No comments:

Post a Comment